ಕುಂದಾಪುರ: ನಕಲಿ ಕಾಗದ ಪತ್ರ ಮಾಡಿ ಕರ್ನಾಟಕ ಬ್ಯಾಂಕ್’ಗೆ ಕೋಟ್ಯಾಂತರ ರೂಪಾಯಿ ವಂಚನೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಶಂಕರನಾರಾಯಣ: ದಂಪತಿಗಳಿಬ್ಬರು ಸೇರಿ ನಕಲಿ ಕಾಗದ ಪತ್ರಗಳ ಆಧಾರದಲ್ಲಿ ಕರ್ನಾಟಕ ಬ್ಯಾಂಕ್ ನಿಂದ ಕೋಟ್ಯಾಂತರ ಸಾಲ ಪಡೆದು ವಂಚಿಸಿದ ಬಗ್ಗೆ ವರದಿಯಾಗಿದೆ.

ವಂಚಿಸಿದ ಆರೋಪಿಗಳನ್ನು ರಾಘವೇಂದ್ರ ಮತ್ತು ಆಶಾಕಿರಣ ವೆಂದು ಗುರುತಿಸಲಾಗಿದೆ.

ಶಂಕರನಾರಾಯಣ ಎಂಬಲ್ಲಿ ದಿನಾಂಕ 2015 ರ ಜೂನ್ 13 ರಂದು ಹೆಮ್ಸ್ ಫುಡ್ಸ್ ಪ್ರೈ ಲಿಮಿಟೆಡ್ ಕಂಪೆನಿಯನ್ನು ತೆರೆದಿದ್ದು, ಈ ಕಂಪೆನಿಗೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಕರ್ಣಾಟಕ ಬ್ಯಾಂಕ್‌ನಲ್ಲಿ ಸಾಲ ಪಡೆಯಲು ಅರ್ಜಿ ಹಾಗೂ ಸಂಬಧಿಸಿದ ದಾಖಲೆ ಪತ್ರ ಸಲ್ಲಸಿರುತ್ತಾರೆ.

ಅರ್ಜಿ ಸಲ್ಲಿಸುವಾಗ ಕಂಪೆನಿಯ ವಾರ್ಷಿಕ ವ್ಯಾಪಾರ ವಹಿವಾಟು 10,90,60,855.55/- ರೂಪಾಯಿ ಎಂದು ತೋರಿಸಿ ಆಡಿಟ್ ವರದಿಯನ್ನು ತಯಾರಿಸಿ ನೀಡಿದ್ದು ಅದನ್ನು ಪರಿಗಣಿಸಿ ಆರೋಪಿಗೆ ಬ್ಯಾಂಕಿನವರು ಒವರ್ ಡ್ರಾಫ್ಟ್ ಸಾಲವಾಗಿ 3,75,00,000,/- ರೂಪಾಯಿ ಹಾಗೂ ಮೆಶೀನ್ ಖರೀದಿ ಬಗ್ಗೆ 2,70,00,000/- ರೂಪಾಯಿ ಮತ್ತು ಹೊಸ ಕಟ್ಟಡ ಕಟ್ಟಲು 25,00,000/- ರೂಪಾಯಿ ಸಾಲವನ್ನು ಬೇರೆ ಬೇರೆ ದಿನಾಂಕಗಳದ್ದು ನೀಡಿದ್ದಾರೆ.

ಆ ಬಳಿಕ ಆರೋಪಿಗಳು ಸಾಲದ ಕಂತನು ಸರಿಯಾಗಿ ಕಟ್ಟದೆ ಇದ್ದು ಈ ಸಮಯ ಬ್ಯಾಂಕಿನವರು ಆರೋಪಿಯ ಕಂಪೆನಿಯ ವೆಬ್ ಸೈಟ್‌ನ್ನು ಪರಿಶೀಲಿಸಿದಾಗ ಅದರಲ್ಲಿ ಕಂಪೆನಿಯ ವಾರ್ಷಿಕ ವ್ಯಾಪಾರ ವಹಿವಾಟು 15,08.432.83/- ರೂಪಾಯಿ ಇದೆ. ಈ ಮೂಲಕ ಆರೋಪಿಗಳು ಬ್ಯಾಂಕಿಗೆ ವಂಚನೆ ಮಾಡುವ ಉದ್ದೇಶದಿಂದಲೇ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.

ಬ್ಯಾಂಕಿನ ಮ್ಯಾನೇಜರ್ ನೀಡಿದ ದೂರಿನ ಆಧಾರದಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 420, 465,468 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here