ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮಂಗಳೂರಿನ ಬಂಗ್ರಕೂಳೂರು ಬಳಿ ಮನೆಯೊಂದರ ಕೂಲಿ ಕೆಲಸ ಮಾಡುತ್ತಿದ್ದ ನೀರುಮಾರ್ಗ ನಿವಾಸಿ 38 ವರ್ಷದ ಉಮೇಶ್ ಮೃತಪಟ್ಟ ದುರ್ದೈವಿ. ಮನೆಯೊಂದರ ತೋಟದ ಕೆಲಸ ಮಾಡುತ್ತಿದ್ದ ವೇಳೆ ಪಕ್ಕದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ಮೂವರೂ ಕಾರ್ಮಿಕರು ಓಡಿ ಪಾರಾಗಲು ಯತ್ನಿಸಿದ್ದರು. ಇಬ್ಬರು ತಪ್ಪಿಸಿಕೊಂಡಿದ್ದು, ಉಮೇಶ್ ಅವರು ಅಲ್ಲೇ ತೆಗೆದಿದ್ದ ಶೌಚಾಲಯ ಗುಂಡಿಗೆ ಬಿದ್ದಿದ್ದು, ಅವರ ಮೇಲೆ ಕುಸಿದ ಮಣ್ಣು ಬಿದ್ದಿದೆ.

ಗುಂಡಿಯಲ್ಲಿ ಬಿದ್ದ ಬಳಿಕ ಅವರ ಮೇಲೆ ಕಾಂಪೌಂಡ್ ಗೋಡೆಯ ಮಣ್ಣು ಬಿದ್ದಿದ್ದು, ಮಣ್ಣಿನಡಿಯಲ್ಲೇ ಜೀವಂತ ಸಮಾಧಿಯಾಗಿದ್ದಾರೆ. ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಉಮೇಶ್ ಮೃತದೇಹ ಮೇಲಕ್ಕೆತ್ತಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .

LEAVE A REPLY

Please enter your comment!
Please enter your name here