ಸಂತ್ರಸ್ತರ ನೆರೆವಿಗೆ ನಾವಿದ್ದೇವೆ, ನೀವು ಕೈ ಜೋಡಿಸಿ – ಪುನೀತ್ ಮನವಿ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಕೊಪ್ಪಳ,(ಅ.18): ಕೊರೊನಾದಿಂದಾಗಿ ಈಗಾಗಲೇ ಚಿತ್ರ ಮಂದಿರಗಳು ಬಂದ್ ಆಗಿದ್ದು ಸಿನಿಮಾ ರಂಗ ಸಂಕಷ್ಟಕ್ಕೆ ಸಿಲುಕಿದೆ.ಲಾಕ್‍ಡೌನ್ ಬಳಿಕ ಈಗಷ್ಟೇ ಸಿನಿಮಾ ರಂಗದ ಚಟುವಟಿಕೆಗಳು ನಡೆಯುತ್ತಿವೆ. ಕಲಾವಿದರನ್ನು ಪ್ರೋತ್ಸಾಹಿಸಲು ಸಿನಿಮಾ ಮಂದಿರಗಳಿಗೆ ನೀವ್ಗಳು ಬಂದು ಸಿನಿಮಾ ನೋಡಿ ಸಹಕರಿಸಬೇಕು ನಮಗೆ ಸಹಾಯ ಆಗುತ್ತದೆ ಎಂದು ನಟ ಪುನೀತ್ ರಾಜಕುಮಾರ್ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.

ಜಿಲ್ಲಾಯ ಗಂಗಾವತಿ ತಾಲೂಕಿನ ಮಲ್ಲಾಪುರದ ಬಳಿ ನಡೆಯುತ್ತಿರುವ ಜೇಮ್ಸ್ ಚಿತ್ರದ ಶೂಟಿಂಗ್‍ನಲ್ಲಿ ಮಾತನಾಡಿದ ಪುನೀತ್ ಅವರು ಲಾಕ್‍ಡೌನ್‍ನಿಂದಾಗಿ ಸುದೀರ್ಘ 7 ತಿಂಗಳ ಕಾಲ ಚಿತ್ರರಂಗದ ಕಾರ್ಯಚಟುವಟಿಕೆಗಳೆಲ್ಲವೂ ಬಂದ್ ಆಗಿದ್ದವು. ಕಲಾವಿದರನ್ನು ಪ್ರೋತ್ಸಾಹಿಸಲು ಸಿನಿಮಾ ಮಂದಿರಗಳಿಗೆ ಬಂದು ಸಿನಿಮಾ ನೋಡಿ ನಮ್ಮ ನೆರವಿಗೆ ನಿಲ್ಲಿ ಉತ್ತರ ಕರ್ನಾಟಕದಲ್ಲಿನ ನೆರೆ ಪ್ರವಾಹದಿಂದ ಸಾಕಷ್ಟು ನಷ್ಟ ಸಂಭವಿಸಿದೆ. ಪ್ರವಾಹ, ನೆರೆ ಸಂಕಷ್ಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಕೃತಿಯ ಮುಂದೆ ನಾವೆಲ್ಲ ಸಣ್ಣವರು.
ನಿಸರ್ಗದ ನಿಯಮವನ್ನು ನಾವು ಪಾಲನೆ ಮಾಡಬೇಕು. ಸಂಕಷ್ಟದ ತೀವ್ರತೆ ಕಂಡು ಬಂದರೆ ನಾನು ವೈಯಕ್ತಿಕವಾಗಿ ಮತ್ತು ಇಡೀ ಚಿತ್ರ ತಂಡ, ಸಂತ್ರಸ್ತರ ನೆರವಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

LEAVE A REPLY

Please enter your comment!
Please enter your name here