ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ತೆಂಕನಿಡಿಯೂರು : ಕಾರ್ಯಾಗಾರ
ಉಡುಪಿ, ಅಕ್ಟೋಬರ್ 12 : ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಹಾಗೂ ಐ.ಕ್ಯೂ.ಎ.ಸಿ. ವಿಭಾಗದ ವತಿಯಿಂದ ಅಕ್ಟೋಬರ್ 8 ರಂದು ವಿದ್ಯಾರ್ಥಿಗಳಿಗೆ ರೂರಲ್ ಎಂಟರ್ ಫ್ರೆನ್ಯೂವರ್‍ಶಿಪ್ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

ಮಹಾತ್ಮಾ ಗಾಂಧಿ ನ್ಯಾಶನಲ್ ಕೌನ್ಸಿಲ್ ಆಫ್ ರೂರಲ್ ಎಜ್ಯುಕೇಶನ್, ಉನ್ನತ ಶಿಕ್ಷಣ ಸಚಿವಾಲಯದ ಸಂಚಾಲಕ ಡಾ.ನಾರಾಯಣ್ ಕೆ. ಮಾತನಾಡಿ ಸ್ವ-ಉದ್ಯೋಗ ಮತ್ತು ರೂರಲ್ ಎಂಪ್ಲಾಯಿಮೆಂಟ್ ಬಗ್ಗೆ ವಿದ್ಯಾರ್ಥಿಗಳಿಗೆ ಉದಾಹರಣೆಗಳ ಮೂಲಕ ತಿಳಿಯಪಡಿಸಿದರು.

ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಎಂ.ಜಿ.ಎನ್.ಸಿ.ಆರ್.ಇ ನಿರ್ದೇಶಕ ಚೇತನ್ ಚಿತ್ತಾಲ್ಕರ್, ಉಪಸ್ಥಿತರಿದ್ದರು.

ವಾಣಿಜ್ಯ ಶಾಸ್ತ್ರದ ಮುಖ್ಯಸ್ಥ ಪ್ರೊ.ಟಿ.ಜಿ. ಭಟ್, ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಎಂ.ಕಾಂ. ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here