ಉಡುಪಿ: ರಾತ್ರಿಯಿಡಿ ಸುರಿದ ಮಹಾ ಮಳೆ; ತಗ್ಗು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ: ಜಿಲ್ಲೆಯಲ್ಲಿ ಸತತವಾಗಿ ಗಾಳಿ ಮಳೆ ಮುಂದುವರಿದಿದ್ದು ಶನಿವಾರ ರಾತ್ರಿಯಿಂದ ಮಹಾ ಮಳೆ ಮುಂದುವರಿದಿದೆ.

ಕರಾವಳಿ ಪ್ರದೇಶದಲ್ಲಿ ಮಳೆಯೊಂದಿಗೆ ವೇಗವಾಗಿ ಗಾಳಿಯು ಬೀಸುತ್ತಿದ್ದು ಸಮುದ್ರ ಪ್ರಕ್ಷುಬ್ಧವಾಗಿದೆ. ಜಿಲ್ಲೆಯ ತಾಲೂಕುಗಳಾದ ಕುಂದಾಪುರ, ಬ್ರಹ್ಮಾವರ,ಬೈಂದೂರು,ಕಾಪು,ಕಾರ್ಕಳ, ಉಡುಪಿಯಲ್ಲಿ ಸತತವಾಗಿ ಮಳೆಯಾಗುತ್ತಿದೆ.

ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಮನೆಗಳಿಗೆ ನೀರು ನುಗ್ಗಿದೆ. ಗಾಳಿ ಮಳೆಯ ಕಾರಣ ಕೆಲವು ಕಡೆ ಮರಗಳು ಬಿದ್ದ ಬಗ್ಗೆ ವರದಿಯಾಗಿದೆ.

ಬ್ರಹ್ಮಾವರ ಸಮೀಪ ರಸ್ತೆಗಳು ಜಲಾವೃತವಾಗಿ ರಸ್ತೆಯಲ್ಲಿ ನಿಂತಿದ್ದ ವಾಹನಗಳು ನೀರಿನಲ್ಲಿ ಮುಳುಗಡೆಗೊಂಡ ಬಗ್ಗೆ ವರದಿಯಾಗಿದೆ.ಮಲ್ಪೆಯಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದ ಬಗ್ಗೆ ಮಾಹಿತಿ‌ ಲಭ್ಯವಾಗಿದೆ. ಭಾನುವಾರ ಬೆಳಿಗ್ಗೆ ಕೂಡ ಮಳೆ ಮುಂದುವರಿದಿದೆ.

ನೆರೆ ಭೀತಿ:

ಇಂದು ರಾತ್ರಿ 3 ಘಂಟೆಗೆ ಸ್ವರ್ಣ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು ಇಡಿ ರಾತ್ರಿ ಬಿರುಸಿನ ಮಳೆಯಾಗಿದ್ದರಿಂದ ನೆರೆಯಿಂದಾಗಿ ಉಡುಪಿ ಜಿಲ್ಲೆಯ ಉಪ್ಪೂರು, ಬೈಕಾಡಿ, ತೋನ್ಸೆ, ನಯಂಪಳ್ಳಿ ಹಾಗು ಕೆಳಮಟ್ಟದ ತಗ್ಗು ಪ್ರಧೇಶಗಳು ಮುಳುಗಡೆಯಾಗಿವೆ.

ಸಪ್ಟೆಂಬರ 19ರ ಸಂಜೆ 5 ಘಂಟ್ಟೆಯಿಂದ ಆರಂಬವಾದ ನಿರಂತರ ಆಕಾಲಿಕ ಮಳೆ ಇನ್ನೂ 20ರ ಬೆಳಗ್ಗೆ ತನಕ ನಿಲುಗಡೆಯಿಲ್ಲದೆ ದಾರಕಾರವಾಗಿ ಸುರಿಯುತ್ತಿರುವುದರಿಂದ ಅನಿರೀಕ್ಷಿತ ಪರಿಸ್ಥಿತಿ ಸಂಭವಿಸಿದೆ.
ಉಪ್ಪೂರು ಗ್ರಾಮದ ಬೇಬಿ ಮತ್ತು ಪ್ರಶಾಂತ್ ಇವರ ಮನೆಯ ಒಳಗಡೆ ನೀರು ನುಗ್ಗುತ್ತಿದೆ ಎಂದು ತಿಳಿಸಿದ್ದು ರಾತ್ರಿ ಯಾವುದೆ ರಕ್ಷಣೆ ಕಾರ್ಯವಿಲ್ಲದೆ ಬೆಳಗಾಗುವ ತನಕ ಕಾಯುತಿದ್ದಾರೆ.

LEAVE A REPLY

Please enter your comment!
Please enter your name here