ಉಡುಪಿ: ಸೌದಿಯಲ್ಲಿದ್ದ ವ್ಯಕ್ತಿಯ ಫೇಸ್ಬುಕ್ ಹ್ಯಾಕ್ ಮಾಡಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ- ಇಬ್ಬರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಉಡುಪಿ, ಅಕ್ಟೋಬರ್ 17: ಹರೀಶ್ ಬಂಗೇರ ಅವರ ಸೋಷಿಯಲ್ ಮೀಡಿಯಾ ಖಾತೆಯನ್ನು ಹ್ಯಾಕ್ ಮಾಡಿ ಅನುಚಿತ ವಿಷಯವನ್ನು ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಮೂಡಬಿದ್ರಿಯ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಉಡುಪಿ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ತಿಳಿಸಿದ್ದಾರೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ವಿಷ್ಣುವರ್ಧನ್, “ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಹರೀಶ್ ಬಂಗೇರಾ ಅವರ ಫೇಸ್ ಬುಕ್ ಖಾತೆಯನ್ನು ಮೂಡಬಿದರೆಯ ಅಬ್ದುಲ್ ಉಯಿಸ್ ಮತ್ತು ಅಬ್ದುಲ್ ತುವೆಸ್ ಸಹೋದರರು ಹ್ಯಾಕ್ ಮಾಡಿ ಪೋಸ್ಟ್ ಮಾಡಿದ ಆರೋಪವಿದೆ. ಕಳೆದ ಜೂನ್ ನಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು

ಈ ಮುಂಚೆ ಹರೀಶ್ ಅವರ ಖಾತೆಯಿಂದ ಅನುಚಿತ ವಿಷಯವನ್ನು ಪೋಸ್ಟ್ ಮಾಡಲಾಗಿದೆ ಎಂದು ಭಾವಿಸಿ ಹರೀಶ್ ಬಂಗೇರಾ ಅವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದರು.

ಎರಡೂ ಅಪರಾಧಿಗಳನ್ನು ಉಡುಪಿ ಪೊಲೀಸರು ಬಂಧಿಸಿ ದೋಷರೋಪ ಪಟ್ಟಿ ಸಲ್ಲಿಸಲಾಗಿದೆ. ವಿವರವಾದ ಪ್ರಕರಣದ ವರದಿಯನ್ನು ಪೊಲೀಸ್ ಇಲಾಖೆಗೆ ಸಲ್ಲಿಸಲಾಗಿದೆ. “ನಾನು ವೈಯಕ್ತಿಕವಾಗಿ ಪ್ರಕರಣದ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆ. ಶೀಘ್ರದಲ್ಲೇ ಹರೀಶ್ ಬಂಗೇರಾ ಅವರನ್ನು ಸೌದಿ ಅರೇಬಿಯಾ ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೆಕ್ಕಾದಲ್ಲಿ ಧರ್ಮನಿಂದನೆಯ ಫೇಸ್‌ಬುಕ್ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಸೌದಿ ಅರೇಬಿಯಾದ ಪೊಲೀಸರು ಹರೀಶ್ ಬಂಗೇರಾ ಅವರನ್ನು ಬಂಧಿಸಿದ್ದರು.

ಸೌದಿ ಅರೇಬಿಯಾದಲ್ಲಿ ತಂತ್ರಜ್ಞನಾಗಿ ಕೆಲಸ ಮಾಡುತ್ತಿದ್ದ ಸಂಸ್ಥೆಯು ಹರೀಶ್ ಅವರ ವಿರುದ್ಧ ಕ್ರಮ ಕೈಗೊಂಡಿತ್ತು ಮತ್ತು ಪೋಸ್ಟ್ ವೈರಲ್ ಆದ ತಕ್ಷಣ ಅವರನ್ನು ಕೆಲಸದಿಂದ ವಜಾಗೊಳಿಸಿದರು.

ತನ್ನ ಪತಿಯ ವಿರುದ್ಧದ ಪಿತೂರಿ ಆರೋಪಿಸಿ ಹರೀಶ್ ಅವರ ಪತ್ನಿ ಉಡುಪಿ ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here